ಸುದ್ದಿ
ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಹೈಕೋರ್ಟ್ ನಲ್ಲಿ ಅರ್ಜಿ ವಜಾ
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತರನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರವಾಗಿ ಲತವ್ಯ ಆಚಾರ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಬುಧವಾರ ಪ್ರಕಟಿಸಿತು.
ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.