ಇತ್ತೀಚಿನ ಸುದ್ದಿಸುದ್ದಿ
ಶಿವಮೊಗ್ಗದ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕಿರುಕುಳ ದೂರು
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪೊಕ್ಸೊ ಪ್ರಕರಣಗಳು (ಜುಲೈ 20-2023) ದಾಖಲಾಗಿವೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳಾಗಿವೆ.
ಶಿವಮೊಗ್ಗದ ಪ್ರತಿಷ್ಟಿತ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮದೇ ಕಾಲೇಜಿನ ವಿದ್ಯಾರ್ಥಿನಿಯ ಜೊತೆ ಸಂಪರ್ಕ ಬೆಳೆಸಿದ್ದರು. ಪ್ರಾಂಶುಪಾಲರಿಗೆ 48 ವರ್ಷವಾಗಿದ್ದು, ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದೆ. ಪಾಠ ಮಾಡುವ ವಿದ್ಯಾರ್ಥಿನಿಗೆ ನಂಬಿಸಿ, ಆಕೆಯ ಜೊತೆ ಸಂಪರ್ಕ ಬೆಳೆಸಿದ್ದರು. ಪ್ರಾಂಶುಪಾಲರು ಕಾಲೇಜಿನಲ್ಲಿ ಚೆನ್ನಾಗಿಯೇ ಪಾಠ ಮಾಡುತ್ತಿದ್ದರು. ಎಲ್ಲಾ ಮಕ್ಕಳು ಪ್ರಾಂಶುಪಾಲರ ಪಾಠವನ್ನು ಚೆನ್ನಾಗಿ ಆಲಿಸುತ್ತಿದ್ದರು. ಇದನ್ನ ಬಳಸಿಕೊಂಡ ಪ್ರಾಂಶುಪಾಲರು 17 ವರ್ಷದ ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.