ಶೀಘ್ರದಲ್ಲೇ ರಾಜ್ಯಕ್ಕೆ ಕ್ರೀಡಾ ವಿಶ್ವವಿದ್ಯಾನಿಲಯ.!
ಬೆಳಗಾವಿ, ಡಿ.17- ರಾಜ್ಯದಲ್ಲಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾನಿಲಯಯೊಂದನ್ನು ಸ್ಥಾಪಿಸಲಾಗುತ್ತಿದ್ದು, ಈ ಸಂಬಂಧ ಹಲವು ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.
ನಗರದಲ್ಲಿಂದು ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಎಸ್.ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಂದು ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಉದ್ದೇಶ ಸರ್ಕಾರಕ್ಕೆ ಇದೆ. ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
ಈ ವೇಳೆ ಕೊಡುಗೆ ಜಿಲ್ಲಾಯಲ್ಲಿಯೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ಎಸ್.ವೀಣಾ ಅಚ್ಚಯ್ಯ ಬೇಡಿಕೆ ಇಟ್ಟರು. ಆಗ ಉತ್ತರಿಸಿದ ಸಚಿವರು, ಸದ್ಯ ಯಾವ ಜಾಗದಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂದು ನಿರ್ಧಾ ಮಾಡಿಕೊಂಡಿಲ್ಲ. ಈ ಬಗ್ಗೆ ಚರ್ಚೆ, ಸಭೆಗಳಾದ ವೇಳೆ ನಿಮ್ಮನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದರು.
ಅಲ್ಲದೆ ಈಡೀ ಕರ್ನಾಟಕದಲ್ಲಿ ಕೊಡುಗೆ ಜಿಲ್ಲಾ ಕ್ರೀಡೆಗೆ ಮಹತ್ವ ನೀಡಿದೆ. ಈಗಾಗಲೇ 25 ಕ್ರೀಡಾ ಪಟುಗಳು ಅನೇಕ ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದಾರೆ. ಇನ್ನೂ, ಇತ್ತೀಚಿಗಷ್ಟೇ ಮೂರು ಜನ ಒಲಂಪಿಕ್ಸï ಗೆ ಹೋಗಿದ್ದಾರೆ ಎಂದ ಅವರು, ಕೆಲ ದಿನಗಳ ಹಿಂದೆಯೇ ಕೊಡುಗು ಕ್ರೀಡಾ ಚಟುವಟಿಕೆಗಳಿಗೆ 2.18 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ನುಡಿದರು.