ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಶಾಸಕ ಕೆ.ಎಂ ಉದಯ್
ಕೆ.ಎಂ ದೊಡ್ಡಿ :-
ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಿಗೆ ನೀಡುವ ಪೈಪೋಟಿ ನೀಡುವ ರೀತಿಯಲ್ಲಿ ಮಣಿಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ತಂದು ಕಾಲೇಜಿನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ ಉದಯ್ ತಿಳಿಸಿದರು.
ಇಲ್ಲಿಗೆ ಸಮೀಪದ ಮಣಿಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾಲೇಜಿನ ನಾಲ್ಕು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಕೆ.ಎಂ ದೊಡ್ಡಿ ಸಮೀಪದ ಮೆಳಹಳ್ಳಿ ಗ್ರಾಮದ ಬಳಿ ಕೃಷಿ ಇಲಾಖೆಯ ರೈತ ಸಂಪರ್ಕ ಕೆಂದ್ರದ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದರು.
ಇದೆ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಂ ಉದಯ್ ರವರು,ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕೆಂಬ ಮಹತ್ವಾಕಾಂಕ್ಷಯೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಬೇಕಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿವುದು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಶಾಸಕರ ಬಳಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕೆ ರಾಜ್ಯ ಸಾರಿಗೆ ಬಸ್ ಗಳು ಮಣಿಗೆರೆ ಗ್ರಾಮದ ಬಳಿ ಬಸ್ ನಿಲುಗಡೆಗೆ ಮಾಡಬೇಕು ಹಾಗೂ ಸರ್ಕಾರದಿಂದ ನಿಲ್ಲಿಸಿರುವ ವಿದ್ಯಾರ್ಥಿ ವೇತನಗಳ ಬಿಡುಗಡೆಗೆ ಸರ್ಕಾರದಿಂದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಕಾಲೇಜಿನ ಅವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಹಾಗೂ ಕಾಲೇಜಿನ ಸುರಕ್ಷಿತೆಗೆ ಕಾಲೇಜಿನ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುಕೊಡುವಂತೆ ಶಾಸಕರ ಬಳಿ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಮಣಿಗೆರೆಯಲ್ಲಿ ಸಾರಿಗೆ ಬಸ್ ಗಳನ್ನು ನಿಲ್ಲಿಸುವಂತೆ ಈಗಾಗಲೆ ಸಾರಿಗೆ ಸಚಿವರಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರೀಡೆಗೆ ಅನುಕೂಲವಾಗುವಂತ ಕ್ರೀಡಾಂಗಣ , ಇನ್ನೂ ಹೆಚ್ಚಿನ ಕೊಠಡಿಗಳು ಪ್ರತಿಭಾಂತ ಅಧ್ಯಾಪಕರ ನೇಮಕಾತಿಗೆ ಸಂಬಂದಿಸಿದಂತೆ ಸರ್ಕಾರಕ್ಕೆ ಮನವಿ ಸೇರಿದಂತೆ ಹಾಗೂ ಕಾಲೇಜಿನ ಅಭಿವೃದ್ಧಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಸಕಾ೯ರಿ ಶಾಲಾ ಕಾಲೇಜುಗಳಲ್ಲಿ ಓದಿದ ಗ್ರಾಮೀಣ ಪ್ರತಿಭೆಗಳನ್ನು ಕಾಣಬಹುದು ಎನ್ನುವುದಕ್ಕೆ ನ್ಯಾಯಾಧೀಶರಾದ ಅಣ್ಣೂರಿನ ರಂಜೀತ ಸಾಕ್ಷಿಯಾಗಿದ್ದಾರೆ.
ಪ್ರತಿಯೊಬ್ಬರಲ್ಲಿಯೂ ಒಂದೊಂದು ಪ್ರತಿಭೆ ಅಡಕವಾಗಿದ್ದು ಆಸಕ್ತಿಗೆ ಅನುಗುಣವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧಕರಾಗಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎ.ಎಸ್.ರಾಜೀವ್, ಕೆ.ಎಂ ದೊಡ್ಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಲ್ಯ ಅರ್ಕೇಶ್,ಮನ್ ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಪ್ರಾಂಶುಪಾಲರಾದ ಡಾ.ಬರಗೂರಪ್ಪ, ಪ್ರಕಾಶ್,ಪೂಜಾರಿ ಮಹೇಶ್,ಅಣ್ಣೂರು ಮನೋಹರ್,ಅಭಿ,ಶೀನ,ಮೆಣಸಗೆರೆ ಪ್ರಕಾಶ್,ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.