ಇತ್ತೀಚಿನ ಸುದ್ದಿಸುದ್ದಿ

ಸುಡಾನ್​ನಲ್ಲಿ ಸೇನಾ ವಿಮಾನ ಪತನ, 46 ಮಂದಿ ಸಾವು

ವಿಮಾನ ಅಪಘಾತದಿಂದಾಗಿ ಭಾರಿ ಸ್ಫೋಟ ಸಂಭವಿಸಿದ್ದು, ಹತ್ತಿರದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಉತ್ತರ ಓಮ್‌ಡರ್ಮನ್ ನಿವಾಸಿಗಳು ವರದಿ ಮಾಡಿದ್ದಾರೆ. ಕಳೆದ ತಿಂಗಳು ದಕ್ಷಿಣ ಸುಡಾನ್‌ನಲ್ಲಿಯೂ ಸಹ ವಿಮಾನ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 21 ಜನರಿದ್ದರು. ವಿಮಾನ ಅಪಘಾತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದರು.

ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅಗ್ನಿಶಾಮಕ ದಳದವರು ಅಪಘಾತ ಸ್ಥಳದಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಟೊನೊವ್ ವಿಮಾನ ಅಪಘಾತಕ್ಕೆ ತಾಂತ್ರಿಕ ದೋಷ ಕಾರಣ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ವಿಮಾನ ಪತನಗೊಂಡ ಪ್ರದೇಶದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button