ರಾಜ್ಯ
ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿ
ಕೋಲಾರ, ನ.18- ದತ್ತಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಖಂಡಿಸಿ ಇಂದು ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಕೋಲಾರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಕಳೆದ ಶನಿವಾರ ದತ್ತಮಾಲಾಧಾರಿಗಳು ಚಿಕ್ಕಮಗಳೂರಿನತ್ತ ಭಜನೆಯೊಂದಿಗೆ ಸಾಗುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದರು.
ಈ ವೇಳೆ ಕೆಲ ದತ್ತಮಾಲಾಧಾರಿಗಳು ಗಾಯಗೊಂಡಿದ್ದು , ಇದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಕೋಲಾರ ಬಂದ್ಗೆ ಕರೆ ನೀಡಿದ್ದು ವ್ಯಾಪಕ ಯಶಸ್ವಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಸಾರಿಗೆ ಬಸ್ಗಳ ಸಂಚಾರ ಸಂಪೂರ್ಣ ಸ್ತಬ್ಧವಾಗಿದ್ದವು.ಹೊಟೇಲ್ಗಳು, ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ತುಂತುರು ಮಳೆಯ ನಡುವೆಯೂ ಪ್ರತಿಭಟನಾಕಾರರು ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.