ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮ ಅಭಿನಯದ ಮೂಲಕ ರಂಜಿಸುತ್ತಿದ್ದ ಕನ್ನಡದ ಹಿರಿಯ ಹಾಸ್ಯ ಕಲಾವಿದ ಶಂಕರ್ ರಾವ್ (Shankar Rao) ನಿಧನರಾಗಿದ್ದಾರೆ. 84 ವರ್ಷದವಾರಿಗದ್ದ ಶಂಕರ್ ರಾವ್ ಅವರು ಅಕ್ಟೋಬರ್ 18ರಂದು ಅಂದರೆ ಇಂದು ಬೆಳಿಗ್ಗೆ ಅರಕೆರೆಯಲ್ಲಿರುವ ತಮ್ಮ ಮನೆಯಲ್ಲೇ 6.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ಕಲಾವಿದ ಅವರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಳೆದ ಕೆಲ ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ಮಡದಿ ಉಮಾ ಅವರು ಕಳೆದ ವರ್ಷ ನಿಧನರಾಗಿದ್ದರು. ತೆರೆ ಮೇಲೆ ಮಾತ್ರವಲ್ಲದೆ ನಿಜ ಜೀವನದಲ್ಲೂ ಹಾಸ್ಯ ಪ್ರವೃತ್ತಿಯ ವ್ಯಕ್ತಿತ್ವ ಉಳ್ಳವರಾಗಿದ್ದ ಶಂಕರ್ ಅವರು ಸದಾ ಸುತ್ತಲು ಇದ್ದವರನ್ನು ಲವಲವಿಕೆಯಿಂದ ಮಾತನಾಡಿಸುತ್ತಾ ನಗಿಸುತ್ತಿದ್ದರು.
ಹಿರಿಯ ನಟ ಶಂಕರ್ ರಾವ್ ಅಗಲಿಕೆಗೆ ಸ್ಯಾಂಡಲ್ವುಡ್ ಸಲೆಬ್ರಿಟಿಗಳು ಹಾಗೂ ರಂಗಭೂಮಿ ಕಲಾವಿದರು ಕಂಬನಿ ಮಿಡಿಯುತ್ತಿದ್ದಾರೆ. ಹಿರಿಯ ನಟನ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಬನಶಂಕರಿಯ ಚಿತಾಗಾರದಲ್ಲಿ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.