ಚಿತ್ರದುರ್ಗ(ಅ.18): ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ(Chitradurga) ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು(Four family members) ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಾಲ್ವರು ಊಟ ಮಾಡಿದ್ದ ಆಹಾರವನ್ನ ಪರೀಕ್ಷೆ ಮಾಡಿದ ಎಫ್ಎಸ್ಎಲ್ (FSL), ಆಹಾರದಲ್ಲಿ ವಿಷ ಬೆರೆತಿರುವ ಕುರಿತು ವರದಿ ನೀಡಿದೆ. ತಂದೆ, ತಾಯಿ, ತಂಗಿ, ಅಜ್ಜಿ ಸಾವಿನ ಹಿಂದೆ ಅಪ್ರಾಪ್ತ ಪುತ್ರಿಯ ಕೈವಾಡ ಇರೋದು ಪೋಲೀಸರ ತನಿಖೆ(Police Investigation)ಯಲ್ಲಿ ಬಯಲಾಗಿದೆ. ತಂದೆ ತಾಯಿ ಕೂಲಿ ಕೆಲಸಕ್ಕೆ ಕಳುಹಿಸುತ್ತಿದ್ದರು, ಬೈಯುತ್ತಿದ್ದರು ಅನ್ನೋ ಕಾರಣಕ್ಕೆ ತಿನ್ನುವ ಅನ್ನಕ್ಕೆ ವಿಷ(Poison) ಹಾಕಿದ್ದನ್ನ ಆರೋಪಿ ಒಪ್ಪಿಕೊಂಡಿದ್ದಾಳೆ.
ಅಪ್ರಾಪ್ತೆಗೆ ಏನೂ ಆಗದಿರುವುದೇ ಪೊಲೀಸರಿಗೆ ಬಂದ ಡೌಟ್
ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಗ್ರಾಮದಲ್ಲಿ ವಿಷಾಹರ ಸೇವಿಸಿ ನಾಲ್ವರು ಸಾವನ್ನಪಿದ ಘಟನೆ ಜುಲೈ 13 ರಂದು ನಡೆದು ಹೋಗಿತ್ತು. ಈ ಘಟನೆಯಲ್ಲಿ ಒಂದೇ ಕುಟುಂಬದ ತಿಪ್ಪೇಶ್ ನಾಯ್ಕ, ಪತ್ನಿ ಸುಧಾ ಭಾಯಿ, ರಮ್ಯ, ತಿಪ್ಪೇಶ್ ನಾಯ್ಕ್ ತಾಯಿ ಗುಂಡಿಭಾಯಿ ಸಾವನ್ನಪ್ಪಿದ್ದರು. ಉಳಿದಂತೆ ತಿಪ್ಪೇಶ್ ನಾಯ್ಕ್ ಪುತ್ರ ರಾಹುಲ್ ದಾವಣಗೆರೆ ಆಸ್ಪತ್ರೆಯಲ್ಲಿ ದಾಖಲಾದ್ರೆ, ತಿಪ್ಪೇಶ್ ನಾಯ್ಕನ ಓರ್ವ ಪುತ್ರಿ ಮಾತ್ರ ಏನೂ ಆಗದೇ ಬದುಕಿ ಉಳಿದಿದ್ದಳು.
ಮನೆಮಂದಿಗೆಲ್ಲಾ ವಿಷವಿಕ್ಕಿದ್ದಳು
ಅಂದು ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆ ಅಧಿಕಾರಿಗಳು ರಾತ್ರಿ ಊಟಮಾಡಿದ್ದ ಆಹಾರವನ್ನ ಸಂಗ್ರಹಿಸಿ FSL ವರದಿಗೆ ರವಾನೆ ಮಾಡಿದ್ದರು. ಅದೇ ಸಮಯದಲ್ಲಿ ಪೋಲೀಸರು ಆಕೆ ಬಳಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದರು. ವಿಪರ್ಯಾಸ ಅಂದ್ರೆ ರಾತ್ರಿ ಊಟದೊಳಗೆ ವಿಷ ಹಾಕಿದ್ದ ಆಕೆ, ಬರಿ ಅನ್ನ ಸಾಂಬರ್ ಮಾತ್ರ ಊಟ ಮಾಡಿದ್ದಳು. ಉಳಿದವರೆಲ್ಲಾ ಮುದ್ದೆ, ಅನ್ನ, ಸಾಂಬಾರ್ ಊಟ ಮಾಡಿದ್ರು, ಅಂತ ಏನೂ ಅರಿಯದವಳಂತೆ ಮಾಹಿತಿ ನೀಡಿದ್ದಳು. ಅಲ್ಲದೇ ಅವರು ಮನೆಯ ಹೊರಗಡೆ ಮುದ್ದೆ ಮಾಡಿದ್ದಾಗಿ ಹೇಳಿದ್ದು, ಬೇರೆ ಯಾರೋ ವಿಷ ಹಾಕಿರಬಹುದು ಅನ್ನೋ ಶಂಕೆ ವ್ಯಕ್ತವಾಗಿತ್ತು.