2ನೇ ಪಿಯುಸಿ ಫಲಿತಾಂಶ ಪ್ರಕಟಿಸಲು ಸಜ್ಜಾದ ಇಲಾಖೆ, ಯಾವಾಗ ರಿಸಲ್ಟ್?
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಸಂತೋಷವಾಗುವಂತೆ ಮಾಡಿದ್ದು, ಶೇ85 ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಪಿಯುಸಿ ಮೌಲ್ಯಮಾಪನ ಬಹುತೇಕ ಮುಕ್ತಾಯವಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ ನಾಲ್ಕನೇ ವಾರದಲ್ಲಿ ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 337319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 600519 ಫ್ರೆಶರ್ ವಿದ್ಯಾರ್ಥಿಗಳಾಗಿದ್ದು, 61808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ?
* ಪದವಿಪೂರ್ವ ಅಧಿಕೃತ ವೆಬ್ ಸೈಟ್ www.karresult.nic.in ಹೋಗುವುದು.
* ಅಥವಾ www.pue.kar.nic.in or www.karresult.nic.inpuc2022 ಎಂಬುದನ್ನು ಕ್ಲಿಕ್ ಮಾಡಿ.
* ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.
* ನೋಂದಣಿ ನಂಬರ್ ಅನ್ನು ಎಂಟ್ರಿ ಮಾಡಿ Submit ಬಟನ್ ಅನ್ನು ಕ್ಲಿಕ್ ಮಾಡಿದರೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
* ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಬಹುದು. ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್‌ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.