ಇತ್ತೀಚಿನ ಸುದ್ದಿ

ಕಾಡಾನೆ ಸಮಸ್ಯೆಗಿಲ್ಲ ಪರಿಹಾರ. ಜನಸಾಮಾನ್ಯರಲ್ಲಿ ಬೀತಿ: ಶಾಸಕ ಸಿಮೆಂಟ್ ಮಂಜು

ಸಕಲೇಶಪುರ:ತಾಲೂಕಿನ ಬೆಳಗೋಡು ಹೋಬಳಿ ಮೂಗಲಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ಶೋಭಾ ಎಂಬ ಮಹಿಳೆ ಮೃತಪಟ್ಟಿದ್ದು,ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು,ಜಿಲ್ಲಾಧಿಕಾರಿ ಲತಾಕುಮಾರಿ.ಕಾಗ್ರೇಸ್ ಮುಖಂಡ ಮುರಳಿಮೋಹನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ,ಮೃತರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದೆ.
ಈಗಾಗಲೇ ಕಾಡಾನೆ /ಕಾಡು ಪ್ರಾಣಿಗಳ ದಾಳಿಗೆ ಸರಿಸುಮಾರು 80ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದರು ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಫಲವಾಗಿರುವುದು ಶೋಚನೀಯ, ಸರ್ಕಾರದ ಗಮನಕ್ಕೆ ಹಲವು ಬಾರಿ ಕಾಡಾನೆ, ಕಾಡು ಪ್ರಾಣಿಗಳ ಹಾವಳಿ ಕುರಿತು ಮನವಿ ಸಲ್ಲಿಸಿದ್ದರು ಸಹ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.ಇದೇ ವೇಳೆ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:ಧರಣೇಂದ್ರ ಹೆಚ್.ಎಂ

Related Articles

Leave a Reply

Your email address will not be published. Required fields are marked *

Check Also
Close
Back to top button