ಐಪಿಎಲ್‌ನ ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲಾರ್ಧದ ಲೀಗ್ ಹಂತದಲ್ಲಿ ಅತ್ಯಂತ ಕಳಪೆ ಆಟ ಪ್ರದರ್ಶಿಸಿತ್ತು. ಆದರೆ, ದ್ವಿತಿಯಾರ್ಧದಲ್ಲಿ ಅವರ ಪ್ರದರ್ಶನ ನಿಜಕ್ಕೂ ಅದ್ಭುತವಾಗಿತ್ತು.
ಕೆಕೆಆರ್ತಂಡವನ್ನು ಸೌರವ್ ಗಂಗೂಲಿ ಮುನ್ನಡೆಸಿದ್ದರೂ ಆರಂಭದ ಮೂರು ಋತುವಿನಲ್ಲಿ ಕೆಕೆಆರ್ ಅಗ್ರ ನಾಲ್ಕನೇ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿತ್ತು. ಆದರೆ, ನಂತರ ಗೌತಮ್ ಗಂಭೀರ್ ನಾಯಕತ್ವ ವಹಿಸಿದ ನಂತರ ಕೆಕೆಆರ್ ತಂಡ ನಂತರ ಮುಂದಿನ ಮೂರು ವರ್ಷಗಳಲ್ಲಿ ಎರಡು ಐಪಿಎಲ್ ಪ್ರಶಸ್ತಿಗಳನ್ನು ಜಯಿಸಿತ್ತು.
ಕೋಲ್ಕತ್ತಾ ನೈಟ್ ರೈಡರ್ಸ್ 2014 ರಿಂದ ಮತ್ತೊಂದು ಟ್ರೋಫಿ ಗೆಲ್ಲಲು ಸಾಕಷ್ಟು ಕಠಿಣ ಪ್ರಯತ್ನ ನಡೆಸುತ್ತಿದೆ. ಆದರೆ, ಸಿಎಸ್ಕೆ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ಪ್ರಶಸ್ತಿ ಕನಸನ್ನು ಕೈಚೆಲ್ಲಿ ನಿರಾಸೆ ಅನುಭವಿಸಿದೆ.