ಇತ್ತೀಚಿನ ಸುದ್ದಿರಾಜಕೀಯ

ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ: ಮುನಿರತ್ನ

ಬೆಂಗಳೂರು: ವಾರ್ಡ್ ನಂ.160 ರಾಜರಾಜೇಶ್ವರಿ ನಗರದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಡುವೆ ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವುದರಿಂದಾಗಿ ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ನಾನು ನನ್ನ ಮತದಾರರಿಗೆ ಭರವಸೆ ಕೊಡ್ತೀನಿ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತೆ. ಭೌಗೋಳಿಕವಾಗಿ ಜಾಗ ಕೂಡ ಹಾಗೇ ಇದೆ. 1,015 ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸಬೇಕು ಅದೇ ಈ ಸಮಸ್ಯೆಗೆ ಪರಿಹಾರ. ಕೆಲವೊಂದು ಕಡೆ ರಾಜಕಾಲುವೆ ನೀರು ಒಂದೇ ಕಡೆ ನಿಲ್ಲುತ್ತದೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರೋರನ್ನು ಪಟ್ಟಿ ಮಾಡಲಾಗಿದೆ. ಈಗಾಗಲೇ ಸಾಕಷ್ಟು ತೆರವು ಮಾಡಿದ್ದೇವೆ. ಮಿಕ್ಕಿದನ್ನು ಕೂಡಲೇ ತೆರವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಈಗಾಗಲೇ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಹರಿಸಿದ್ದಾರೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವುದು ಈ ಸಮಸ್ಯೆಗೆ ಪ್ರಮುಖ ಕಾರಣ. ರಾಜಕಾಲುವೆ ಒತ್ತುವರಿ ಮಾಡಿ ಜಾಗ ಮಾರಾಟವಾದಾಗ ಖರೀದಿದಾರರು ಈ ಬಗ್ಗೆ ಗಮನ ಹರಿಸುವುದಿಲ್ಲ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಆಗದಂತೆ ಜನಪ್ರತಿನಿಧಿಗಳು ಗಮನಹರಿಸಬೇಕಾದ ಅನಿವಾರ್ಯತೆ ಇದೆ ಎಂದರು.

Related Articles

Leave a Reply

Your email address will not be published. Required fields are marked *

Back to top button