22 ಇಲಾಖೆಯ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದು
ರಾಜ್ಯಮಟ್ಟದ ನಿಗಮ ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಉಪಾಧ್ಯಕ್ಷ, ನಾಮ ನಿರ್ದೇಶನವನ್ನು ತಕ್ಷಣದಿಂದಲೇ ಜಾರಿ ಬರುವಂತೆ ರದ್ದು ಪಡಿಸಿ ಆದೇಶವನ್ನು ಹೊರಡಿಸಲಾಗಿದೆ.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ. ಉಮೇಶ್ ಶಾಸ್ತ್ರಿ ಆದೇಶವನ್ನು ಹೊರಡಿಸಿದ್ದಾರೆ. ಈ ಮೂಲಕ ನಿಗಮ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಯು ರದ್ದಾಗಿದೆ.
ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಮಾಹಿತಿ ತಂತ್ರಜಾನ, ಸಾರಿಗೆ ಇಲಾಖೆ, ನಗರಾಭಿವೃದ್ದಿ ಇಲಾಖೆ, ಇಂಧನ ಇಲಾಖೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ 22 ಇಲಾಖೆಗಳಿಗೆ ಸಂಬಂಧಿಸಿದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಾಮ ನಿರ್ದೇಶಿತರನ್ನು ರದ್ದು ಪಡಿಸಲಾಗಿದೆ.
ಬಿಜೆಪಿಯಲ್ಲಿ ಹಲವು ಕಾರ್ಯಕರ್ತರು ಪಕ್ಷಕ್ಕಾಗಿ ಸೇವೆಯನ್ನು ಸಲ್ಲಿಸಿದವರು ಮಾಜಿ ಶಾಸಕರು ಸೇರಿದಂತೆ ಸಚಿವ ಸ್ಥಾನ ವಂಚಿತರನ್ನು ಸಂತೃಪ್ತಿಗೊಳಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಿಗಮ ಮಂಡಳಿ ಹೊಸಬರಿಗೆ ಅವಕಾಶ; ನಿಗಮ ಮಂಡಳಿಗಳ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನವಾಗಿದೆ. ಬೇರೆಯವರಿಗೂ ಅವಕಾಶ ಒದಗಿಸಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿರವರು ತಿಳಿಸಿದ್ದಾರೆ.