ಕ್ರೈಂ
ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಕಿಂಗ್ ಪಿನ್ ಬಂಧನ
ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಬ್ರೇಜ್ (35) ಎಂದು ಗುರ್ತಿಸಲಾಗಿದೆ. ಬಂಧಿತ ಆರೋಪಿ ವಾಟ್ಸಾಪ್ ಗ್ರೂಪ್ಗಳ ಮೂಲಕ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದನೆಂದು ತಿಳಿದುಬಂದಿದೆ.
ಗಲಭೆ ವೇಳೆ ಪೊಲೀಸ್ ವಾಹನ ಸೇರಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈತನ ಹೆಸರು ಪ್ರಕರಣದ ಚಾರ್ಜ್ಶೀಟ್ನಲ್ಲೂ ನಮೂದಾಗಿತ್ತು. ಪ್ರಕರಣದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದನು. ತಾಂತ್ರಿಕ ಮಾಹಿತಿ ಆಧರಿಸಿ ಈತನನ್ನು ಸೆ. 20ರಂದು ತನಿಖಾಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿ ಸಂಗಾಯ್ ಪುರ ವಾರ್ಡ್ ನಲ್ಲಿ ಸಕ್ರಿಯ ಎಸ್’ಡಿಪಿಐ ಸದಸ್ಯನಾಗಿದ್ದ ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.