ಸುದ್ದಿ

ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

ಬೆಂಗಳೂರು: ತಮ್ಮ ನಿಶ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಎರಡು ದಿನಗಳ ಹಿಂದೆ ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ಪದ್ಮಶ್ರೀ, ನ್ಯಾಷನಲ್ ಸಿಟಿಜನ್ ಅವಾರ್ಡ್, ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ, ಗುಲ್ಬರ್ಗದ ಕೇಂದ್ರಿಯ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಇದೀಗ ಅಂತಾಷ್ಟ್ರೀಯ ಮಟ್ಟದ ಸಂಸ್ಥೆಯೊಂದು ಅವರ ಸಾಧನೆ ಮೆಚ್ಚಿ ಪ್ರಶಸ್ತಿ ನೀಡಿ ಗೌರವಿಸಿದೆ.

80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು ಈಗ ಫಲನೀಡುತ್ತಾ ಸಮಾಜಕ್ಕೆ ಆಸ್ತಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಸಂಸ್ಥೆ ರಾಜ್ಯಪಾಲರ ಮೂಲಕ ಗೌರವಪೂರ್ವಕವಾಗಿ ಪ್ರಶಸ್ತಿ ನೀಡಿದೆ. ಇನ್ನೊಂದು ವಿಶೇಷ ಅಂದರೆ ವೃಕ್ಷಮಾತೆ ಜೊತೆಗೆ ಅವರ ದತ್ತು ಪುತ್ರ ಉಮೇಶ್ ರವರಿಗೂ ಕೂಡ ತಾಯಿ ಜೊತೆಗೆ ಅಂತರಾಷ್ಟ್ಟೀಯಮಟ್ಟದ ಪ್ರಶಸ್ತಿ ಲಭಿಸಿದೆ.Dailyhunt

Related Articles

Leave a Reply

Your email address will not be published. Required fields are marked *

Back to top button