ಕ್ರೈಂ
ಮೇಘಾಲಯ: ನದಿಗೆ ಉರುಳಿದ ಬಸ್, 6 ಮಂದಿ ಸಾವು
ಶಿಲ್ಲಾಂಗ್: ಮೇಘಾಲಯದ ನೋಂಗ್‌ಚ್ರಾಮ್‌ನ ರಿಂಗ್ಡಿ ನದಿಗೆ ಬಸ್ ಉರುಳಿಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ ಕನಿಷ್ಠ 21 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಪಡೆ ಮತ್ತು ತುರ್ತು ಸೇವಾ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದೆ. ಬಸ್ ತುರಾದಿಂದ ಶಿಲ್ಲಾಂಗ್‌ಗೆ ಪ್ರಯಾಣ ಬೆಳೆಸಿತ್ತು.
ನಾಲ್ವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನಿಬ್ಬರ ಮೃತದೇಹಗಳು ಬಸ್ ಒಳಗೆ ಸಿಲುಕಿವೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
16 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.