ರಾಜ್ಯ
ಅಕ್ಟೋಬರ್ 7,8 ರಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ಬೆಂಗಳೂರು : ಅಕ್ಟೋಬರ್ 7,8 ರಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಅಕ್ಟೋಬರ್ 7 ಮತ್ತು 8 ರಂದು 2 ದಿನ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಧಾರವಾಡದಲ್ಲಿ ಏಮ್ಸ್ ಮಾದರಿ ಆಸ್ಪತ್ರೆಗೆ ಪ್ರಸ್ತಾವನೆ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಜೊತೆಗೆ ದೆಹಲಿ ಪ್ರವಾಸದ ವೇಳೆ ಬಿಜೆಪಿ ವರಿಷ್ಠರನ್ನೂ ಸಿಎಂ ಬೊಮ್ಮಾಯಿ ಅವರು ಭೇಟಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.