ಕ್ರೀಡೆ
ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ
ಕ್ರಿಕೆಟ್ : ಗ್ಲೆನ್ ಮ್ಯಾಕ್ಸ್‌ವೆಲ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು. ಗೆಲುವಿನ ಗುರಿ ಬೆನ್ನತ್ತಿದ ಆರ್‌ಸಿಬಿ 17.1 ಓವರ್‌ಗಳಲ್ಲಿ3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಗೆಲುವಿನ ನಗೆ ಬೀರಿದೆ.
ಆರ್.ಸಿ.ಬಿ. ಪರವಾಗಿ ವಿರಾಟ್ ಕೊಹ್ಲಿ 25, ದೇವದತ್ತ ಪಡಿಕಲ್ 22, ಶ್ರೀಕರ್ 44, ಗ್ಲೆನ್ ಮ್ಯಾಕ್ಸ್ವೆಲ್ ಅಹೇಯ 50 ಹಾಗೂ ಎಬಿ ಡಿವಿಲಿಯರ್ಸ್ ಅಜೇಯ 4 ರನ್ ಗಳಿಸಿದರು. ಮ್ಯಾಕ್ಸ್ವೆಲ್ 30 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು.