ಸಿನಿಮಾ
ಸ್ಯಾಂಡಲ್ವುಡ್ ನಟಿ ಸೌಜನ್ಯಾ ನೇಣಿಗೆ ಶರಣು
ಬೆಂಗಳೂರು : ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರದ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಬಾಯ್ ಫ್ರೆಂಡ್ ವಿವೇಕ್ ಜೊತೆ ವಾಸವಾಗಿದ್ದರು. ವಿವೇಕ್‍ನನ್ನು ಊಟ ತರುವಂತೆ ಕಳುಹಿಸಿ ನಂತರ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ನಟಿ ಸೌಜನ್ಯಾ ಅವರು ಚೌಕಟ್ಟು ಫನ್, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.