ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ () ನಡುವೆ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಕೆಕೆಆರ್ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮುಂದಿನ 2ನೇ ಎಲಿಮಿನೇಟರ್ (IPL 2021 Eliminator) ಪಂದ್ಯದಲ್ಲಿ ಬುಧವಾರ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಗೆಲುವಿಗಾಗಿ ಸೆಣಸಲಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ಗೆ (Kolkatta Night Riders) ಗೆಲುವು ಅಷ್ಟು ಸುಲಭವಲ್ಲ ಎಂಬ ವಿಚಾರ ತಿಳಿದಿದೆ.
ಆದರೆ, ಆರ್ಸಿಬಿ ಪಂದ್ಯದ ನಂತರ ಮಾತನಾಡಿರುವ ಕೆಕೆಆರ್ (KKR) ತಂಡದ ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (Shubman Gill), “ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠವಾಗಿದೆ. ಈ ವರ್ಷ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ, ಕೆಕೆಆರ್ ಸಹ ಗೆಲುವಿನ ಟ್ರ್ಯಾಕ್ನಲ್ಲಿದ್ದು, ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು” ಎಂದು ಅವರು ಭರವಸೆ ನೀಡಿದ್ದಾರೆ.
ಎರಡನೇ ಎಲಿಮಿನೇಟರ್ ಪಂದ್ಯದ ಬಗ್ಗೆ ಮಾತನಾಡಿರುವ ಶುಭಮನ್ ಗಿಲ್, “ಈ ಋತುವಿನ ಆರಂಭದಲ್ಲಿ ಕೆಕೆಆರ್ ಅಷ್ಟೇನು ಉತ್ತಮ ಪ್ರದರ್ಶನವನ್ನು ನೀಡಿರಲಿಲ್ಲ. ಹೀಗಾಗಿ ನಮ್ಮ ತಂಡ ಪ್ಲೇ ಆಫ್ ಪ್ರವೇಶಿಸಲಿದೆ ಎಂದು ಸಹ ಅನೇಕರು ಭಾವಿಸಿರಲಿಲ್ಲ. ಆದರೆ, ದ್ವಿತಿಯಾರ್ಧದಲ್ಲಿ ನಾವು ನಿಜಕ್ಕೂ ಅದ್ಭುತವಾದಂತಹ ಪ್ರದರ್ಶನವನ್ನು ನೀಡಿದ್ದೇವೆ. ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳಿದ್ದೇವೆ.