Karnataka Rains Today ಬೆಂಗಳೂರು(ಅ.18):ಅರಬ್ಬಿ ಸಮುದ್ರದಲ್ಲಿನ(Arabian Sea) ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಕೇರಳ(Kerala) ಮತ್ತು ಕರ್ನಾಟಕದಲ್ಲಿ(Karnataka) ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ(Rainfall) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ(IMD) ನೀಡಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಡಿಮೆ ಒತ್ತಡದ ಪ್ರದೇಶವು ಈಗ ತೆಲಂಗಾಣ ಮತ್ತು ಪಕ್ಕದ ಭಾಗಗಳ ಮೇಲೆ ಇದೆ. ಅಸೋಸಿಯೇಟೆಡ್ ಸೈಕ್ಲೋನಿಕ್ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿಮೀ ವರೆಗೆ ವಿಸ್ತರಿಸುತ್ತಿದೆ.