ಕತ್ರಿನಾ ಕೈಫ್ ಡ್ಯಾನ್ಸ್ ಪ್ರಾಕ್ಟೀಸ್ ವಿಡಿಯೋ ವೈರಲ್,
Katrina Kaif: ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರ ಮದುವೆಯ ಸುದ್ದಿ ಇತ್ತೀಚಿನ ದಿನಗಳಲ್ಲಿ ಚರ್ಚೆಯಲ್ಲಿದೆ. ಏತನ್ಮಧ್ಯೆ, ಕತ್ರಿನಾ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ. ಈ ವೀಡಿಯೋ ನೋಡಿದ ಅಭಿಮಾನಿಗಳು ಕತ್ರಿನಾ ತಮ್ಮ ಮದುವೆಗಾಗಿ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದಾರೆ ಎಂದು ಊಹಿಸುತ್ತಿದ್ದಾರೆ. ಆದರೆ ಈ ಬಗ್ಗೆ ಕತ್ರಿನಾ ಕೈಫ್ ಏನನ್ನೂ ಸ್ಪಷ್ಟಪಡಿಸಿಲ್ಲ.
ಕತ್ರೀನಾ ಅವರ ಡ್ಯಾನ್ಸ್ ವಿಡಿಯೋ ವೈರಲ್ :
ವಿಡಿಯೋದಲ್ಲಿ ನಟಿ ಕತ್ರಿನಾ ಕೈಫ್ (Katrina Kaif) ತಂಡದ ಜೊತೆ ಡ್ಯಾನ್ಸ್ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದು. ಇದರಲ್ಲಿ ಕತ್ರಿನಾ ಕಪ್ಪು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಕತ್ರಿನಾ ಕೈಫ್ ಪ್ರತಿ ಬಾರಿಯೂ ಅತ್ಯುತ್ತಮವಾದ ಡ್ಯಾನ್ಸ್ ಸ್ಟೆಪ್ಸ್ ಮಾಡುತ್ತಿರುವುದು ಕಂಡು ಬರುತ್ತಿದೆ ಮತ್ತು ಅವರ ಡ್ಯಾನ್ಸ್‌ನ ಉತ್ಸಾಹ ಎದ್ದು ಕಾಣುತ್ತಿದೆ. ಕತ್ರಿನಾ ಕೈಫ್ ಅವರ ಈ ವೀಡಿಯೊವನ್ನು (Katrina Kaif Dance Video Viral) ಅವರ ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದಾರೆ. ಈ ವಿಡಿಯೋವನ್ನು ಇದುವರೆಗೆ 7 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕತ್ರಿನಾ ಕೈಫ್ ಅವರ ಡ್ಯಾನ್ಸ್ ಸ್ಟೆಪ್ಸ್ ಮತ್ತು ಅವರ ಸೌಂದರ್ಯವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
ಮದುವೆಗೆ ಮುನ್ನ ಬಾಡಿಗೆಗೆ ಪಡೆದ ಹೊಸ ಮನೆ:
ವರದಿಯೊಂದರ ಪ್ರಕಾರ, ವಿಕ್ಕಿ ಕೌಶಲ್ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif) ಮದುವೆಗೆ ಮೊದಲು ಮುಂಬೈನ ಜುಹುದಲ್ಲಿ ಮನೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮನೆಗಾಗಿ ವಿಕ್ಕಿ-ಕತ್ರಿನಾ ಭಾರೀ ಮೊತ್ತವನ್ನು ಪಾವತಿಸಿದ್ದಾರೆ ಎಂಬ ವರದಿಗಳಿವೆ. ಇಬ್ಬರೂ ಐಷಾರಾಮಿ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದಾರೆ. ವಿಶೇಷವೆಂದರೆ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ.
ಇಬ್ಬರೂ ಸ್ಟಾರ್‌ಗಳು ಅತ್ಯುತ್ತಮ:
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಬ್ಬರೂ ಉತ್ತಮ ಕಲಾವಿದರು. ವಿಕ್ಕಿ ಕೌಶಲ್ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸರ್ದಾರ್ ಉದಾಮ್’ ( Sardar Udham) ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅದೇ ಸಮಯದಲ್ಲಿ ಕತ್ರಿನಾ ಕೈಫ್ ಅಭಿನಯದ ‘ಸೂರ್ಯವಂಶಿ’ (Sooryavanshi) ಚಿತ್ರವೂ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಅವರು ಅಕ್ಷಯ್ ಕುಮಾರ್, ಅಜಯ್ ದೇವಗನ್ ಮತ್ತು ರಣವೀರ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ್ದಾರೆ.