ಮಹತ್ವದ ಘೋಷಣೆ ಮಾಡಿದ ಅಪ್ಪು ಪತ್ನಿ..
ಪುನೀತ್ ರಾಜ್ಕುಮಾರ್ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಅದೆಲ್ಲವೂ ಪೂರ್ಣಗೊಳ್ಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು. ಈಗ ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹೆಗಲು ಏರಿದೆ. ಪಿಆರ್ಕೆ ಪ್ರೊಡಕ್ಷನ್ ಹೌಸ್ ಸೇರಿ ಎಲ್ಲ ಉದ್ಯಮಗಳನ್ನು ಅವರೇ ನೋಡಿಕೊಳ್ಳಬೇಕಿದೆ. ಈಗ ಅಶ್ವಿನಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ. ಹಾಗಾದರೆ ಏನದು ವಿಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಆ ಸಮಯ ಈಗ ಬಂದಿದೆ.
ಈ ವಿಚಾರದ ಕುರಿತು ಅಶ್ವಿನಿ ಪುನೀತ್ ರಾಜ್ಕುಮಾರ್ ಟ್ವೀಟ್ ಒಂದನ್ನು ಮಾಡಿದ್ದಾರೆ. ‘ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ, ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಬರೆದುಕೊಂಡಿದ್ದಾರೆ.