ಲೋಕಪಲ್ಲಿ ಕ್ರಾಸ್ ಹತ್ತಿರ ರಸ್ತೆ ಕ್ರಾಸ್ ಇದ್ದರು, ಸಹ ವೇಗವಾಗಿ ಚಾಲಕ ಬಸ್ ಓಡಿಸುತ್ತಿದ್ದ ಕಾರಣ ಬಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಇನ್ನು ಚಾಲಕ ಪರಾರಿಯಾಗಿದ್ದು, ಚಾಲಕನ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದ್ದು, ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಎಷ್ಟು ಸರಿ ಎಂದು ಜನರು ಪ್ರಶ್ನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಸ್ ಅಪಘಾತದ ಸುದ್ದಿಗಳು ಹೆಚ್ಚು ವರದಿಯಾಗುತ್ತಿದ್ದು, ಇದಕ್ಕೆ ಚಾಲಕರ ನಿರ್ಲಕ್ಷ್ಯ ಕಾರಣವಾ ಅಥವಾ ಬೇರೆ ಏನು ಎಂಬುದು ತಿಳಿದುಬರುತ್ತಿಲ್ಲ.
ಕಳೆದ ಕೆಲವು ದಿನಗಳ ಹಿಂದೆ ರಾಜಸ್ಥಾನದ ಬಾರ್ಮರ್-ಜೋಧ್‌ಪುರ ಹೆದ್ದಾರಿಯಲ್ಲಿ (Barmer-Jodhpur Highway ) ಖಾಸಗಿ ಬಸ್ ಮತ್ತು ಟ್ಯಾಂಕರ್(Bus-Tanker Collision) ನಡುವೆ ಭಾರೀ ಡಿಕ್ಕಿ ಸಂಭವಿಸಿತ್ತು, ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಬಸ್‌ಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಸಜೀವ ದಹನವಾಗಿದ್ದಾರೆ.
ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೆಲ ಪ್ರಯಾಣಿಕರು ಕಿಟಕಿ ಒಡೆದು ಹೊರಗೆ ಬಂದಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 10 ಜನರನ್ನು ರಕ್ಷಿಸಿದ್ದಾರೆ.
ಅಲ್ಲದೇ ಕೆಲವು ತಿಂಗಳ ಹಿಂದೆ ಬೆಂಗಳೂರಿನಿಂದ ಕೇರಳದ ಕನ್ನೂರು ಜಿಲ್ಲೆಗೆ ಹೊರಟ್ಟಿದ್ದ ಸರ್ಕಾರಿ ಬಸ್ ಕರ್ನಾಟಕ-ಕೇರಳ ಗಡಿಯಲ್ಲಿ ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. . ಅಪಘಾತದಲ್ಲಿ 15 ಪ್ರಯಾಣಿಕರಿಗೆ ಗಾಯಗಳಾಗಿವೆ. ನಸುಕಿನ 4:45ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಒಟ್ಟು 20 ಪ್ರಯಾಣಿಕರಿದ್ದರು. 15 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಅಪಘಾತಕ್ಕೆ ಬಲಿಯಾಗಿದ್ದಾರೆ. ಪೆರುಂಬೋಡಿ ಚೆಕ್ ಪೋಸ್ಟ್ ಸಮೀಪ ಅಪಘಾತ ಸಂಭವಿಸಿತ್ತು.