ಆರೋಗ್ಯ
ಓಮೈಕ್ರಾನ್ ಸೋಂಕಿರುವ 9ನೇ ಪ್ರಕರಣ ನಗರದಲ್ಲಿ ಪತ್ತೆಯಾಗಿದೆ.
ಬೆಂಗಳೂರು: ಕೊರೊನಾ ವೈರಾಣು ರೂಪಾಂತರ ತಳಿ ಓಮೈಕ್ರಾನ್ ಸೋಂಕಿರುವ 9ನೇ ಪ್ರಕರಣ ನಗರದಲ್ಲಿ ಪತ್ತೆಯಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಆಧರಿಸಿ ಕ್ರಮಗಳನ್ನು ಮುಂದುವರಿಸಲಾಗಿದೆ.
ಕೇರಳದಿಂದ ಬರುವ ವಿದ್ಯಾರ್ಥಿಗಳು ಮತ್ತು ಜನರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ನರ್ಸಿಂಗ್ ಕಾಲೇಜುಗಳ ಮೇಲೆ ಹೆಚ್ಚು ಕಣ್ಣಿಡಲಾಗಿದೆ. ಇತರ ಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಬರುವ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ. ತ್ರಿಲೋಕಚಂದ್ರ ಹೇಳಿದರು.
ಓಮೈಕ್ರಾನ್ ಸೋಂಕಿತರು ಮತ್ತು ಶಂಕಿತರ ಪ್ರತ್ಯೇಕ ವಾಸದ ಮೇಲೂ ನಿಗಾ ವಹಿಸಲಾಗುತ್ತಿದೆ.
ಮನೆಯಿಂದ ಹೊರಗೆ ಬಾರದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ವಿವರಿಸಿದರು.