ಸುದ್ದಿ

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನ: ಕೆಳಗೆ ಬಿದ್ದು ಬಿಬಿಎಂಪಿ ಇಂಜಿನಿಯರ್ ಸ್ಥಳದಲ್ಲೇ ಸಾವು..

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಕೆಳಗೆ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ರಂಗರಾಜು ಎಸ್.ಎ (59) ಮೃತ ದುರ್ದೈವಿ. ನಿನ್ನೆ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ರಂಗರಾಜು ಅವರು ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಗೆ ಹೋಗುವ ರೈಲು ಹತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್​ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ರಂಗರಾಜು ಅವರು ಬಿಬಿಎಂಪಿಯ ಕೆಆರ್​ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

Related Articles

Leave a Reply

Your email address will not be published. Required fields are marked *

Back to top button