ಕ್ರೈಂ
ಮಲ್ಲೇಶ್ವರಂ ಪೊಲೀಸರ ಭರ್ಜರಿ ಕಾರ್ಯಚರಣೆ: ಹೊಸ ವರ್ಷಾಚರಣೆಗೆ ಸಂಗ್ರಹಿಸಿದ್ದ ₹2.5 ಲಕ್ಷ ಮೌಲ್ಯದ ಡ್ರಗ್ಸ್ ಸೀಜ್.!
ಬೆಂಗಳೂರು: ಮಲ್ಲೇಶ್ವರಂ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಹೊಸ ವರ್ಷಕ್ಕೆಂದು ಸಂಗ್ರಹಿಸಿದ್ದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ. ತುರೇ ಮುಸ್ತಫ್, ಶಿಹಾಬ್, ರಾಹುಲ್ ಬಂಧಿತ ಆರೋಪಿಗಳು.
ಆರೋಪಿಗಳು ಆಂಧ್ರಪ್ರದೇಶ ಹಾಗೂ ಆಫ್ರಿಕಾ ಮೂಲದ ವ್ಯಕ್ತಿಗಳಿಂದ ಮಾದಕ ವಸ್ತುಗಳ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, 23 ಗ್ರಾಂ ಎಂಡಿಎಂ ,12 ಗ್ರಾಂ ಎಕ್ಸಟೆಸ್ಸಿ ಫಿಲ್ಸ್ನ್ನು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಮಲ್ವೆಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.