ರಾಜಕೀಯ
ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು : ಕೊರೊನಾ ಕಡಿಮೆ ಕೇಸ್ ಇದ್ದಾಗ ಕರ್ಫ್ಯೂ ಮಾಡಿದ್ರು. ಕೇಸ್ ಹೆಚ್ಚಾದಾಗ ಕರ್ಫ್ಯೂ ತೆಗೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕಡಿಮೆ ಕೇಸ್ ಇದ್ದಾಗ ಕರ್ಫ್ಯೂ ಮಾಡಿದ್ರು.ಕೇಸ್ ಹೆಚ್ಚಾದಾಗ ಕರ್ಫ್ಯೂ ತೆಗೆದಿದ್ದಾರೆ. ರೈತರು ನಷ್ಟ ಅನುಭವಿಸಿದ್ರೂ ಕಾರ್ಯಕ್ರಮ ಕೊಟ್ಟಿಲ್ಲ. ಸಿಮೆಂಟ್, ಕಬ್ಬಿಣದ ದರ ಇಳಿಸಲು ಪ್ರಯತ್ನಿಸಿದ್ರಾ? ಸರ್ಕಾರ ಪ್ರಾಕ್ಟಿಕಲ್ ಆಗಿ ಯೋಜನೆ ಜಾರಿ ಮಾಡಲಿ. ಅವೈಜ್ಞಾನಿಕ ರೂಲ್ಸ್ ಬೇಡ ಎಂದರು.
ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿಗೆ ತಂದು ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ತಡೆದ್ರು. ಜನರಿಗೆ ಬಹಳ ನಷ್ಟ ಆಗುವ ರೀತಿ ನಡೆದುಕೊಂಡ್ರು. ಸರ್ಕಾರ ಪ್ರಾಕ್ಟಿಕಲ್ ಆಗಿ ಯೋಜನೆ ಜಾರಿ ಮಾಡಲಿ. ಆಂಧ್ರ, ತೆಲಂಗಾಣದಲ್ಲಿ ಯಾವುದೇ ಕರ್ಪ್ಯೂ ಇಲ್ಲ. ಇಲ್ಲಿ ಯಾಕೆ ಕರ್ಪ್ಯೂ ಜಾರಿ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.