ಇತ್ತೀಚಿನ ಸುದ್ದಿರಾಜಕೀಯಸುದ್ದಿ

ಇದು ಸಮ್ಮತಿಯ ಸೆಕ್ಸ್ ಪ್ರಕರಣ, ಇಲ್ಲಿ ಲೈಂಗಿಕ ದೌರ್ಜನ್ಯ ನಡೆದಿಲ್ಲ!ಜಾರಕಿಹೊಳಿಗೆ‌ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಸುದ್ದಿ ಹರಿದಾಡುತ್ತಿರುವ ಸಂದರ್ಭದಲ್ಲಿಯೇ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ರಾಸಲೀಲೆ ಸಿಡಿ ಪ್ರಕರಣದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಯುವತಿ ಪರ ವಕೀಲರ ಆಕ್ಷೇಪದ ನಡುವೆಯೂ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪ್ರಕರಣದ ಅಂತಿಮ ವರದಿ ಸಲ್ಲಿಸಲು ವಿಶೇಷ ತನಿಖಾ‌ ತಂಡ (ಎಸ್‍ಐಟಿ)ಗೆ ಗ್ರೀನ್ ಸಿಗ್ನಲ್ ನೀಡಿತು.
ಇದುವರೆಗೆ ಇದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿತು. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಎಸ್‍ಐಟಿ ಕ್ಲೀನ್ ಚಿಟ್ ನೀಡಿದೆ.
ಇದು ಸಮ್ಮತಿಯ ಸೆಕ್ಸ್ ಪ್ರಕರಣ, ಇಲ್ಲಿ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಇಲ್ಲಿ ಅತ್ಯಾಚಾರ ನಡೆದಿದೆ ಎಂಬ ಅಂಶ ಬೆಳಕಿಗೆ ಬಂದಿಲ್ಲ. ಇದನ್ನು ಯುವತಿಯೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಪೂರಕವಾದ ತಾಂತ್ರಿಕ ಸಾಕ್ಷ್ಯಗಳು ಕೂಡ ಇವೆ ಎಂದು ಹೇಳಲಾಗಿದೆ.
ಇoದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಹಾಕಲು ಎಸ್‍ಐಟಿ ತಯಾರಿ ಮಾಡಿಕೊಂಡಿದೆ. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಯುವತಿ ಪರ ವಕೀಲರು ತೀರ್ಮಾನಿಸಿದ್ದಾರೆ.
ಎಸ್‍ಐಟಿ ರಚನೆಯ ನ್ಯಾಯಬದ್ಧತೆ ವಿಚಾರ ಹೈಕೋರ್ಟ್ ನಲ್ಲಿ ವಿಲೇವಾರಿ ಬಾಕಿ ಇದ್ದಾಗ್ಯೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‍ಐಟಿ ತನಿಖಾ ವರದಿ ಸಲ್ಲಿಸಲು ಅವಕಾಶ ನೀಡಿರುವುದನ್ನು ಪ್ರಶ್ನಿಸಲಾಗುತ್ತದೆ ಎಂದು ಯುವತಿ ಪರ ವಕೀಲರು ತಿಳಿಸಿದ್ದಾರೆ.
ಈ ಬೆಳವಣಿಗೆ ಮಧ್ಯೆಯೇ ಪಣಜಿಯಲ್ಲಿ ತಮ್ಮ ರಾಜಕೀಯ ಗುರು, ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‍ರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button