ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಭೀಕರ ಅಪಘಾತ!
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ಅರು ಜನರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ಅರು ಜನರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಆದ್ರೆ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
ಅಪಘಾತಕ್ಕೊಳಗಾದ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿತ್ತು. ಬಸ್ ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎಂಬುದರ ನಿಖರ ಮಾಹಿತಿ ಲಭ್ಯವಾಗಿಲ್ಲ.ಮೃತರ ಗುರುತು ಸಹ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಪಾವಗಡದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ವಿಷಯ ತಿಳಿದ ಜನರು ಆಸ್ಪತ್ರೆಯತ್ತ ಆಗಮಿಸುತ್ತಿದ್ದಾರೆ.
ಮೃತ ಆರು ಜನರಲ್ಲಿ ಓರ್ವನ ಗುರುತು ಪತ್ತೆಯಾಗಿದೆ. 19 ವರ್ಷದ ಕಾಲೇಜು ವಿದ್ಯಾರ್ಥಿ ಕಲ್ಯಾಣ್ ಎಂದು ತಿಳಿದು ಬಂದಿದೆ. ಇನ್ನುಳಿದ ಐವರ ಗುರುತು ಪತ್ತೆಯಾಗಿಲ್ಲ.ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿರುವ ಗಾಯಾಳುಗಳಿಗೆ ಪಾವಗಡದಲ್ಲಿಯೇ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆ ಮತ್ತು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.