ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ!ಹುದ್ದೆಯ ವಿವರಗಳು ಇಲ್ಲಿದೆ.
ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, FDA ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿದ್ದರೆ ನಿಜಕ್ಕೂ ಇದೊಂದು ಉತ್ತಮ ಅವಕಾಶವಾಗಿದ್ದು, ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, FDA ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 20ರ ಒಳಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರ್ ಮತ್ತು ಪದವಿ ಪಡೆದ ಹಾಗೂ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಉತ್ತಮ ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 76
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, FDA
ಸಂಬಳ: 21400-83900/- ಪ್ರತಿ ತಿಂಗಳು
ಹುದ್ದೆಯ ವಿವರಗಳು
ಸಹಾಯಕ ಎಂಜಿನಿಯರ್ ಗ್ರೇಡ್-I (ಸಿವಿಲ್) 43
ಜೂನಿಯರ್ ಎಂಜಿನಿಯರ್ (ಸಿವಿಲ್) 18
ಮೊದಲ ವಿಭಾಗದ ಸಹಾಯಕ (FDA) 5
ಎರಡನೇ ವಿಭಾಗದ ಸಹಾಯಕ (SDA) 10
ಕಂಪ್ಯೂಟರ್ ಸಹಾಯಕ ಗ್ರೇಡ್-I 1
ಶೈಕ್ಷಣಿಕ ಅರ್ಹತೆ
ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯುಟರ್ ಸೈನ್ಸ್ನಲ್ಲಿ ಪದವಿ
ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ರಿಂದ 35 ವರ್ಷಗಳ ಒಳಗಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ವೆಬ್ಸೈಟ್: kridl.org
ಅರ್ಜಿ ಸಲ್ಲಿಸುವ ಲಿಂಕ್: https://kridl.org/Kandownloads.html
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-03-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2022