ಇತ್ತೀಚಿನ ಸುದ್ದಿಕ್ರೈಂರಾಜ್ಯಸುದ್ದಿ
ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ
ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ ಪರಿಶೀಲನೆ ನಡೆಸಲಾಗುತ್ತಿದೆ.
ಮಂಗಳವಾರ ಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಮಾಲೀಕರು ಆಗಿರುವ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಅಕ್ರಮ ಆಸ್ತಿಗಳಿಕೆ ಪ್ರಕರಣದ ಆರೋಪದ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರಿನ 5 ಪ್ರದೇಶಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.