ಇತ್ತೀಚಿನ ಸುದ್ದಿ

ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಡಿಸೆಂಬರ್​ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​​ನನ್ನು ಬಂಧಿಸಿದ್ದರು.

ಅಲಿ ಅಬ್ಬಾಸ್ ಮೂಲತಃ ಮುಂಬೈ ನಿವಾಸಿಯಾಗಿದ್ದು, ನಾಲ್ಕು ವರ್ಷದ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದನು. ದಂಪತಿ ಹಾಗೂ ಮೂವರು ಮಕ್ಕಳು ಸಮೇತ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದನು. ಅಲಿ ಅಬ್ಬಾಸ್​ ಡಾಟಾ ಕನ್ಸಲ್‌ಟೆಂಟ್‌ ಆಗಿ ಒಂದು ವರ್ಷದಿಂದ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಕೊರೊನಾ ಸಂದರ್ಭದಲ್ಲಿ ಅಲಿ ಅಬ್ಬಾಸ್ ಕೆಲಸ ಬಿಟ್ಟಿದ್ದನು. ಪತ್ನಿ ನ್ಯೂಟ್ರಿ ಕೇರ್ ಆಸ್ಪತ್ರೆ ನಡೆಸುತ್ತಿದ್ದರು.

ಶಂಕಿತ ಉಗ್ರ ಅಲಿ ಅಬ್ಬಾಸ್​ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ಡಿಸೆಂಬರ್​​ 9ರ ನಸುಕಿನ ಜಾವ 5:30 ಸುಮಾರಿಗೆ ಶಂಕಿತ ಉಗ್ರನ ಮನೆ ಮೇಲೆ ದಾಳಿದ್ದರು. ಶಂಕಿತ ಉಗ್ರ ಅಲಿ ಅಬ್ಬಾಸ್​ ನಗರದಲ್ಲಿ ಉರ್ದು ಶಾಲೆ ನಡೆಸುತ್ತಿದ್ದನು. ಶಂಕಿತ ಉಗ್ರನಿಂದ ಅಧಿಕಾರಿಗಳು 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದರು.

ಮಹಾರಾಷ್ಟ್ರದಲ್ಲೂ ದಾಳಿ

ಎನ್​ಐಎ ಕಳೆದ ಶನಿವಾರ ಬೆಳ್ಳಂ ಬೆಳಿಗ್ಗೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಎನ್​ಐಎ ಅಧಿಕಾರಿಗಳು ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿ, 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದರು. ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಾಂಡ್ಲರ್‌ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು.

Related Articles

Leave a Reply

Your email address will not be published. Required fields are marked *

Back to top button