ಇತ್ತೀಚಿನ ಸುದ್ದಿರಾಜ್ಯ

ಕರವೇ ನಾರಾಯಣಗೌಡ ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು 2 ಠಾಣೆಯ ಪೊಲೀಸರ ತಯಾರಿ

ಬೆಂಗಳೂರು, ಜನವರಿ 08: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ)ನಾರಾಯಣಗೌಡ ಅವರಿಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಹೌದು ಹಳೆ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ.

ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ.

ನಾರಾಯಣಗೌಡ ಜೈಲು ಸೇರಿದ್ದೇಕೆ

ಕಳೆದ ವರ್ಷ ಡಿಸೆಂಬರ್ 27 ರಂದು ಮಾಲ್, ಹೋಟೆಲ್‌ಗಳೂ ಸೇರಿದಂತೆ ವಾಣಿಜ್ಯ ಕಟ್ಟಡಗಳ ನಾಮಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದಾದ್ಯಂತ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯಕರ್ತರು ಮಾಲ್, ಹೋಟೆಲ್‌ಗಳ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿ, ಒಳ ನುಗ್ಗಲು ಯತ್ನಿಸಿದ್ದರು. ಅಲ್ಲದೆ, ಅನ್ಯ ಭಾಷೆಯ ನಾಮಲಕಗಳು, ಫ್ಲೆಕ್ಸ್​, ಬ್ಯಾನರ್, ಹೋರ್ಡಿಂಗ್‌ಗಳನ್ನು ಕಿತ್ತೆಸೆದಿದ್ದರು. ಈ ಸಂಬಂಧ ನಗರದ ಹಲವು ಠಾಣೆಗಳಲ್ಲಿ ನಾರಾಯಣಗೌಡ ಮತ್ತು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.

ಪೊಲೀಸರ ಮೇಲೆ ಹಲ್ಲೆ, ಕರ್ತವ್ಯ ನಿರ್ವಹಣೆಗೆ ಅಡ್ಡಿ, ಸಾರ್ವಜನಿಕ ಆಸ್ತಿಗೆ ಹಾನಿ, ದೊಂಬಿ, ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಆರೋಪದಡಿ ಪೊಲೀಸರು ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button