ಹೊಸಗಾವಿ ಗ್ರಾಮದಲ್ಲಿ ಕಾರ್ಮಿಕ ಇಲಾಖೆ ಮತ್ತು ಸಹಸ್ರ ಕೋಟಿ ಚಾರಿಟೇಬಲ್ ವತಿಯಿಂದ ಆಯೋಜಿಸಿದ್ದ ಉಚಿತಾ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ಕೆಲಸದ ಒತ್ತಡದ ನಡುವೆ ಆರೋಗ್ಯ ನಿರ್ಲಕ್ಷಿಸುತ್ತಿದಾರೆ. ಪ್ರತಿಯೊಬ್ಬರು 6 ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಸಹಸ್ರ ಕೋಟಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಗೌಡ ತಿಳಿಸಿದರು.
ತಾಲೂಕಿನ ಚಿಕ್ಕ ಹೊಸಗಾವಿ ಗ್ರಾಮದಲ್ಲಿ ಕಾರ್ಮಿಕ ಇಲಾಖೆ ಮತ್ತು ಸಹಸ್ರ ಕೋಟಿ ಚಾರಿಟೇಬಲ್ ವತಿಯಿಂದ ಆಯೋಜಿಸಿದ್ದ ಉಚಿತಾ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗರ ಜನರು ಕೂಲಿ ಮಾಡಿ ಜೀವನ ನಡೆಸುವ ಧಾವಂತದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ತೀವ್ರ ಅನರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆಗಳಿಗೆ ಹೋಗಿ ಲಕ್ಷಾಂತರ ಖರ್ಚು ಮಾಡಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಅದನ್ನು ಬಿಟ್ಟು ಆರೋಗ್ಯ ಸಮಸ್ಯೆ ಕಂಡ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ದೊಡ್ಡ ಆರೋಗ್ಯ ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಬಹುದು ಎಂದರು.
ಉತ್ತಮ ಆರೋಗ್ಯಕ್ಕಾಗಿ ಪೋಷ್ಠಿಕಾಂಶವುಳ್ಳ ಆಹಾರ ಸೇವಿಸಬೇಕು, ಹಣ್ಣು, ತರಕಾರಿ, ಸೊಪ್ಪು, ಮಾಂಸ ಮೊಟ್ಟೆ ಸೇರಿದಂತೆ ದವಸ ಧಾನ್ಯಗಳುಳ್ಳ ಸಮತೋಲನ ಆಹಾರ ಸೇವಿಸಿದರೆ ದೀರ್ಘಕಾಲ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಆರೋಗ್ಯ ಶಿಬಿರದಲ್ಲಿ ನೂರಾರು ಮಂದಿಗೆ ಕಣ್ಣು, ಕಿವಿ, ಮಧುಮೇಹ, ರಕ್ತದೊತ್ತಡಗಳಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು.
ಕುಟೀರ ಸಂಸ್ಥೆಯ ಅಧ್ಯಕ್ಷೆ ಮಂಜುಳ, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ಸವಿತಾ ಸೇರಿದಂತೆ ಇತರರು ಇದ್ದರು.
ಮದ್ದೂರು ತಾಲೂಕಿನ ಚಿಕ್ಕ ಹೊಸಗಾವಿ ಗ್ರಾಮದಲ್ಲಿ ಕಾರ್ಮಿಕ ಇಲಾಖೆ ಮತ್ತು ಸಹಸ್ರ ಕೋಟಿ ಚಾರಿಟಲ್ ವತಿಯಿಂದ ಆಯೋಜಿಸಿದ್ದ ಉಚಿತಾ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬಿ.ಎಸ್.ಗೌಡ, ಮಂಜುಳ, ಜಯಲಕ್ಷ್ಮಿ, ಸವಿತಾ ಇದ್ದರು