ಸಂವಿಧಾನ ಜಾಗೃತಿ ಜಾಥಾ ನಾಳೆ ಆಗಮನ – ರಾಧಿಕ ಪ್ರಸಾದ್
ಮದ್ದೂರು
ಸಂವಿಧಾನ ಜಾಗೃತಿ ಜಾಥಾ ಫೆ. 21ರ ಬೆಳಗ್ಗೆ 10 ಗಂಟೆಗೆ ಬೆಸಗರಹಳ್ಳಿಗೆ ಆಗಮಿಸುತ್ತದೆ ಎಂದು ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಪ್ರಸಾದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಾಥಾದಲ್ಲಿ ಕೋಲಾಟ, ತಮಟೆ, ನಗಾರಿ, ಕಂಸಾಳೆ, ವಾದ್ಯಗಳೊಂದಿಗೆ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ಜಾಥಾವನ್ನು ಸ್ವಾಗತಿಸಲಾಗುವುದು. ಜಾಥಾದ ಉದ್ದಕ್ಕೂ ಜನಪದ ಕಲಾತಂಡಗಳು, ವಿದ್ಯಾರ್ಥಿಗಳು ಡಾ.ಬಿ.ಆರ್ ಅಂಬೇಡ್ಕರ್ ಅವರ ವೇಷ ಭೂಷಣಗಳನ್ನು ತೊಟ್ಟು ಹೆಜ್ಜೆ ಹಾಕಲಿದ್ದಾರೆ. ಪ್ರಬಂಧ, ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಅಭಿನಂದನಾ ಪತ್ರವನ್ನು ನೀಡಲಾಗುವುದು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಲಾಗಿದ್ದು, ತಾಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳು ಜಾಥಾದ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.