ಯಡಿಯೂರಪ್ಪ ರವರ 81ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಮನೆದೇವರು ಸ್ವತಂತ್ರ ಸಿದ್ದಲಿಂಗೇಶ್ವರ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ.
ತಾಲ್ಲೂಕಿನ ಬೂಕನಕೆರೆಯ ಸುಪುತ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ 81ನೇ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರ ಮನೆದೇವರು ಸ್ವತಂತ್ರ ಸಿದ್ದಲಿಂಗೇಶ್ವರ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ, ಅರ್ಚನೆ, ಅಭಿಷೇಕ ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಯಡಿಯೂರಪ್ಪ ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು,
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಮೀನಾಕ್ಷಿ ಪುಟ್ಟರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ತೋಟಪ್ಪಶೆಟ್ಟಿ, ಶೈಲೇಂದ್ರ ಮತ್ತಿತರರ ನೇತೃತ್ವದಲ್ಲಿ ಸ್ವತಂತ್ರ ಸಿದ್ದಲಿಂಗೇಶ್ವರರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಯಡಿಯೂರಪ್ಪ ಅವರಿಗೆ ದೀರ್ಘಾಯಸ್ಸು ಕೋರಿ ಪ್ರಾರ್ಥನೆ ಸಲ್ಲಿಸಲಾಯಿತು,
ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್ ಮಾತನಾಡಿ ನಮ್ಮ ಪಕ್ಷದ ಪ್ರಶ್ನಾತೀತ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಸೇವೆ ಹಾಗೂ ಮಾರ್ಗದರ್ಶನ ನಮ್ಮ ರಾಜ್ಯಕ್ಕೆ ಇನ್ನಷ್ಟು ಹೆಚ್ಚು ಬೇಕಾಗಿದೆ.ಆದ್ದರಿಂದ ದೀರ್ಘಾಯುಸ್ಸು ಕೋರಿ ಯಡಿಯೂರಪ್ಪ ಅವರ ಮನೆದೇವರು ಗವೀಮಠದ ಸ್ವತಂತ್ರ ಸಿದ್ದಲಿಂಗೇಶ್ವರ ಸ್ವಾಮಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅವರು ನಾಲ್ಕು ಭಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ರೈತರು, ಬಡವರು, ಧೀನ ದಲಿತರು, ಮಹಿಳೆಯರಿಗೆ ಅನುಕೂಲವಾಗುವಂತೆ ಉತ್ತಮ ಆಡಳಿತ ನಡೆಸಿದ್ದಾರೆ.ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. 2008 ರಲ್ಲಿ ಮೂರು ವರ್ಷ, 2019 ರಲ್ಲಿ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನಡೆಸಿ ರಾಜ್ಯವನ್ನು ರಾಷ್ಟ್ರದಲ್ಲೇ ಉತ್ತಮ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸಿದ್ದರು. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರೂ ಸಹ ತಂದೆಯಂತೆಯೇ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಟ 25ಸ್ಥಾನಗಳಲ್ಲಿ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು,
ಇದೇ ಸಂದರ್ಭದಲ್ಲಿ ಗವೀಮಠದ ಶ್ರೀಗಳಾದ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ತಾ.ಪಂ.ಮಾಜಿ ಸದಸ್ಯರಾದ ಮೀನಾಕ್ಷಿ ಪುಟ್ಟರಾಜು, ಮುಖಂಡರಾದ ಶೈಲೇಂದ್ರ, ವಿ.ಡಿ.ಶಂಕರ್, ಗಂಜಿಗೆರೆ ವಿಜಯ್ ಕುಮಾರ್, ದಡದಹಳ್ಳಿ ರೇವಣ್ಣ, ಗುರುಮೂರ್ತಿ, ರಾಜಶೇಖರ್, ಮಹೇಶ್, ಚೋಕನಹಳ್ಳಿ ರಮೇಶ್, ಗ್ರಾ.ಪಂ.ಸದಸ್ಯ ಶಂಕರ್, ಆಕಾಶವಾಣಿ ಗಾಯಕಿ ಜಯಮ್ಮ, ಅರ್ಚಕರಾದ ಹೇಂಮತ್ ಜಾಸ್ತ್ರೀ ಸೇರಿದಂತೆ ಹಲವಾರು ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು,