ಸರ್ಕಾರದಿಂದ ಹಲವು ಸೌಲಭ್ಯ – ಕೆ.ಎಂ. ಉದಯ್
ಮದ್ದೂರು
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರು, ಯುವಕರು, ನಿರುದ್ಯೋಗಿಗಳಿಗೆ ಹಲವು ಸೌಲಭ್ಯಗಳನ್ನು ಅನೇಕ ನಿಗಮಗಳ ಮೂಲಕ ನೀಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಧೃಡರಾಗಬೇಕು ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ಪಟ್ಟಣದಲ್ಲಿ ಪ್ರವಾಸಿ ಮಂದಿರದ ಡಿ. ದೇವರಾಜು ಅರಸು ಅಭಿವೃದ್ದಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲೀಗೆ ಯಂತ್ರಗಳನ್ನು ವಿತರಿಸಿ ನಂತರ ಅವರು ಮಾತನಾಡಿದರು.
ಸರ್ಕಾರ ಬಡವರ, ಮಹಿಳೆಯರ, ಯುವ ಜನರ, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದವರ ಆರ್ಥಿಕಾಭಿವೃದ್ದಿಗಾಗಿ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ. ಸರ್ವರ ಅಭಿವೃದ್ದಿ ಬದ್ದವಾಗಿರುವ ಸರ್ಕಾರವು ಅಭಿವೃದ್ದಿ ವಿಚಾರದಲ್ಲಿ ರಾಜಿಯಾಗುವುದಿಲ್ಲ ಎಂದರು.
ಸರ್ಕಾರದ ಗ್ರಾಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ರಾಜ್ಯದ ಜನರು ಗ್ಯಾರಂಟಿಗಳಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರದ ನಿರುದ್ಯೋಗಿಗಳು ಮತ್ತು ಮಹಿಳೆಯರಿಗೆ ನಿಗಮಗಳಿಂದ ಹೆಚ್ಚಿನ ಸೌಲಭ್ಯಕೊಡಿಸಲು ಕ್ರಮವಹಿಸಲಾಗುವುದು ಎಂದರು.
ಡಿ. ದೇವರಾಜು ಅರಸು ಅಭಿವೃದ್ದಿ ನಿಗಮದ ಅಧಿಕಾರಿಗಳು ಶಾಸಕ ಕೆ.ಎಂ. ಉದಯ್ ಅವರನ್ನು ಅಭಿನಂದಿಸಿದರು.
ಡಿ. ದೇವರಾಜು ಅರಸು ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಬಿ.ಎನ್. ಬೋರೇಗೌಡ, ಸಹಾಯಕ ಅಭಿವೃದ್ದಿ ಅಧಿಕಾರಿ ಪ್ರದೀಪ್, ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ ಸೇರಿದಂತೆ ಇತರರು ಇದ್ದರು.
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಿ. ದೇವರಾಜು ಅರಸು ಅಭಿವೃದ್ದಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಶಾಸಕ ಕೆ.ಎಂ. ಉದಯ್ ಅವರು ಉಚಿತವಾಗಿ ಹೊಲೀಗೆ ಯಂತ್ರಗಳನ್ನು ವಿತರಿಸಿದರು. ಬಿ.ಎನ್. ಬೋರೇಗೌಡ, ಪ್ರದೀಪ್, ತಿಮ್ಮೇಗೌಡ ಇದ್ದಾರೆ.