17ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಸಿದ್ಧತೆಗೆ ಎಡಿಸಿ ಸೂಚನೆ
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇದೇ ಅ. 17ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬAಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ನಿರ್ದೇಶನ ನೀಡಿದರು.
ಅವರು ಅ. 5ರ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ವೇದಿಕೆ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ಅಂದು ಬೆಳಿಗ್ಗೆ ನಗರದ ಜಿಲ್ಲಾ ಕ್ರೀಡಾಂಗಣದಿAದ ಅಂಬೇಡ್ಕರ್ ಭವನದವರೆಗೆ ಕಲಾತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕಾರ್ಯಕ್ರಮದ ವೇದಿಕೆ, ಶಾಮಿಯಾನ, ಆಸನಗಳು, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು, ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕೆಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು,ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಮಹೇಶ್ ಮೆಂಗಹಳ್ಳಿ, ರೋಹಿತ್ ಸಿ,ಕುಂಬಾಪುರ ಬಾಬು, ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಅಂಜನಾಪುರ ವಾಸು, ಸಮುದಾಯದ ಮುಖಂಡರುಗಳಾದ ಗುಡ್ಡೆ ವೆಂಕಟೇಶ್, ಕೊತ್ತಿಪುರ ಗೋವಿಂದರಾಜು, ಅಶೋಕ್, ಸಿದ್ಧರಾಜು, ಕೂಟಗಲ್ ಶ್ರೀನಿವಾಸ್, ರಾಜು, ಹರೀಶ್ ಬಾಲು, ಶಿವಣ್ಣ, ಪರಮೇಶ್, ವೆಂಕಟರಮಣಪ್ಪ, ರಮೇಶ್, ಶಿವಕುಮಾರ್, ಪುಟ್ಟಸ್ವಾಮಿ, ಲೋಕೇಶ್ ಹಾಗೂ ಇತರರು ಉಪಸ್ಥಿತರಿದ್ದರು.