ಇತ್ತೀಚಿನ ಸುದ್ದಿರಾಜ್ಯ
ನ. 1ರೊಳಗೆ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಪ್ರದರ್ಶನ ಕಡ್ಡಾಯ ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ:ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2024ರ ಅನ್ವಯ ಜಿಲ್ಲಾ ವ್ಯಾಪ್ತಿಯಲ್ಲಿ ಪರವಾನಗಿ (ಅನುಮತಿ) ಪಡೆದು ನಡೆಸುವ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಎಲ್ಲ ರೀತಿಯ ಸಾರ್ವಜನಿಕ ಹಾಗೂ ಖಾಸಗಿ ಸಂಘಸಂಸ್ಥೆಗಳು ನಾಮಫಲಕಗಳಲ್ಲಿನ ಮೇಲ್ಭಾಗದಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ. .
ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಕೆ ಮಾಡದೇ ಇದ್ದಲ್ಲಿ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಕೈಗಾರಿಕೆ, ಅಂಗಡಿ ಮುಂಗಟ್ಟು, ವಾಣಿಜ್ಯ ಸಂಸ್ಥೆ, ಶಿಕ್ಷಣ ಸಂಸ್ಥೆ ಸೇರಿದಂತೆ ಇನ್ನಿತರೆ ಉದ್ಯಮ ಸಂಘಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಲಾಗುತ್ತದೆ. ನವೆಂಬರ್ 1 ರೊಳಗಾಗಿ ನಾಮಫಲಕಗಳ ಮೇಲ್ಭಾಗದಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.