ಇತ್ತೀಚಿನ ಸುದ್ದಿರಾಜ್ಯ

ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮಾಡಲು ಸಚಿವ ಜಮೀರ್ ಅಹ್ಮದ್ ಒಪ್ಪಿಗೆ ಸೂಚಿಸಿದ್ದು, ತಾಲೂಕಿನ ಜನತೆ ಪರವಾಗಿ ಅವರಿಗೆ ಕೃತಜ್ಞತೆಗಳು: ಕೆ.ವೈ.ನಂಜೇಗೌಡ

ಮಾಲೂರು:
ಮಾಲೂರಿನಲ್ಲಿ ಆಶ್ರಯ ಯೋಜನೆಯಲ್ಲಿ 1200 ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವ ಉಚಿತ ನಿವೇಶನದ ಜೊತೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮದ ಮೂಲಕ ಮನೆ ಮಂಜೂರಾತಿ ಮಾಡಲು ಸಚಿವ ಜಮೀರ್ ಅಹಮದ್ ಒಪ್ಪಿಗೆ ಸೂಚಿಸಿದ್ದು, ಅವರಿಗೆ ತಾಲೂಕಿನ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಸಂಬಂಧ ವಿಧಾನಸೌಧದ ರಾಜೀವ ಗಾಂಧಿ ವಸತಿ ನಿಗಮದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವ ಜಮೀರ್ ಅಹಮದ್ ಎರಡು ದಶಕಗಳ ಕಾಲದಿಂದ ನನೆಗುದಿಗೆ ಬಿದಿದ್ದ ಈ ಆಶ್ರಯ ಯೋಜನೆಯನ್ನು ತಾರ್ಕಿಕ ಅಂತ್ಯ ಕಾಣಿಸುವ ಬಗ್ಗೆ ನಡೆಸಿದ ಹೋರಾಟ ಬಗ್ಗೆ ಮಾಹಿತಿ ಪಡೆದರಲ್ಲದೇ ನಮ್ಮ ಪ್ರಯತ್ನವನ್ನು ಶ್ಲಾಘಿಸಿ ಇಲಾಖೆ ಅಧಿಕಾರಿಗಳೊಡನೆ ಸಾಧ್ಯತೆ ಬಾಧ್ಯತೆಯನ್ನು ಚರ್ಚಿಸಿ 30 ಎಕರೆಯಲ್ಲಿ ಬರುವ ಎಲ್ಲ ನಿವೇಶನದಾರರಿಗೆ ಮನೆ ಕಟ್ಟಿಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಿವೇಶನಕ್ಕಾಗಿ ಬಡವರು ಈ ಹಿಂದೆ ಕಟ್ಟಿದ್ದ 35 ಸಾವಿರ ರೂ.ಗಳನ್ನು ಬ್ಯಾಂಕ್ ಬಡ್ಡಿ ಸಮೇತ ಫಲಾನುಭವಿಗಳ ಖಾತೆಗೆ ನೇರವಾಗಿ ಹಿಂದುರುಗಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಬಡಾವಣೆ ನಿರ್ಮಾಣ ಪೂರ್ಣಗೊಳ್ಳಲಿದ್ದು, ಮುಖ್ಯಮಂತ್ರಿಗಳು ಸೇರಿದಂತೆ ಹಲವು ಮಂತ್ರಿಗಳ ಸಮ್ಮುಖದಲ್ಲಿ ಬಡವರಿಗೆ ನಿವೇಶನ ಹಾಗೂ ಮನೆ ಮಂಜೂರಾತಿ ಪತ್ರ ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಮಾಲೂರು ಪುರಸಭೆ ಅಧಿಕಾರಿಗಳಾದ ಮಂಜುನಾಥ್, ಬಿ.ಆರ್.ಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button