ಇತ್ತೀಚಿನ ಸುದ್ದಿಸುದ್ದಿ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮೈಸೂರು, ಜನವರಿ 06: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕಳೆದ ಆರು ದಿನಗಳಿಂದ ಅರಣ್ಯ ಇಲಾಖೆ ಚಿರತೆ ಸೆರೆ ಕಾರ್ಯಾಚರಣೆ ನಡೆಸುತ್ತಿದೆ. ಆರು ದಿನಗಳಿಂದ ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿದೆ. ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ. ಸತತ ಕಾರ್ಯಾಚರಣೆ ನಡೆಸುತ್ತಿದ್ದರು ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿರುವ ಬೋನ್ಗೆ ಮಾತ್ರ ಚಿರತೆ ಬೀಳುತ್ತಿಲ್ಲ. ಹಾಗಾಗಿ ಅರಣ್ಯ ಇಲಾಖೆಗೆ ಮತ್ತಷ್ಟು ತಲೆನೋವಾಗಿದೆ.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️