
ಮಳವಳ್ಳಿ : ಸತ್ತೇಗಾಲ- ಇಗ್ಗಲೂರು ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನಪರ ವೇದಿಕೆ ಹಾಗೂ ರೈತರು ಮಳವಳ್ಳಿ ತಾಲ್ಲೂಕಿನ ಮಳವಳ್ಳಿ – ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಸುರಂಗ ಮಾರ್ಗ ಮುಂದೆ ಪ್ರತಿಭಟನೆ ನಡೆಸಿದರು.
ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ರೈತರು ಕಾಮಗಾರಿ ವಿಳಂಬದ ವಿರುದ್ದ ಘೋಷಣೆ ಕೂಗಿದರು.
ಈ ವೇಳೆ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ಮಾತನಾಡಿ, ಸತ್ತೇಗಾಲ ಯೋಜನೆ ವಿಳಂಬದಿಂದ ಈ ಭಾಗದ ರೈತರಿಗೆ ಹಾಗೂ ರಾಮನಗರ ಜನತೆಗೆ ಸಾಕಷ್ಟು ತೊಂದರೆಯಾಗುತ್ತಿದೆ ಕೂಡಲೇ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಇಲ್ಲದಿದ್ದರೆ ಹಂತ ಹಂತವಾಗಿ ಹೋರಾಟ ಮಾಡುತ್ತೇವೆ ಎಂದರು.
ಇನ್ನೂ ಇದೇ ವೇಳೆ ಜನಪರ ವೇದಿಕೆ ಕಾರ್ಯಾಧ್ಯಕ್ಷ ಮಳವಳ್ಳಿ ಶ್ರೀನಿವಾಸ್ ಮಾತನಾಡಿ, ಸುರಂಗ ಮಾರ್ಗದಿಂದ ಈ ಭಾಗದ ರೈತರಿಗೆ ಸಾಕಷ್ಟು ಹಾನಿಯಾಗುತ್ತಿದ್ದು ಇದಲ್ಲದೆ ಅಂತರ್ಜಲ ಇಲ್ಲದಂತಹಾಗಿದೆ, ಜೊತೆಗೆ ಸುತ್ತಮುತ್ತಲಿನ ಮನೆಗಳಿಗೂ ತೊಂದರೆಯಾಗುತ್ತಿದೆ. ರೈತರಿಗೆ ಪರಿಹಾರ ನೀಡಬೇಕು, ಜೊತೆಗೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಮೊದಲು ರಸ್ತೆತಡೆ, ಪಾದಯಾತ್ರೆ ಇದಕ್ಕೂ ಪರಿಹಾರ ಸಿಗದಿದ್ದರೆ ಕಾಮಗಾರಿ ಸ್ಥಳದಲ್ಲಿ ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ರಮೇಶಗೌಡ,ರಾಜ್ಯ ಕಾರ್ಯಾಧ್ಯಕ್ಷ ಮಳವಳ್ಳಿ ಶ್ರೀನಿವಾಸ್,ರಂಜಿತ್ ಗೌಡ, ಕೃಷ್ಣೇಗೌಡ,ಮಲ್ಲು, ನಾಗರಾಜು ಸೇರಿದಂತೆ ಹಲವು ರೈತರು ಇದ್ದರು