
ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಗ್ರಾಮದ ನಾಡಕಚೇರಿಯ ಗ್ರಾಮ ಲೆಕ್ಕಾಧಿಕಾರಿ (ವಿಎ) ರಮೇಶ್ ಇಂದು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮುದ್ದೇಗೌಡ ಎಂಬುವವರ ಪೌತಿ ಖಾತೆ ಮಾಡಿಕೊಡುವ ಹೆಸರಿನಲ್ಲಿ ವಿಎ ರಮೇಶ್ ಒಟ್ಟು 4,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ 1,000 ರೂ. ಮೊತ್ತವನ್ನು ಪಡೆದಿದ್ದ ಅವರು, ಇಂದು ನಾಡಕಚೇರಿಯಲ್ಲೇ ಬಾಕಿ 3,000 ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಲೆ ಬೀಸಿದರು.
ಲಂಚದ ಹಣದ ಸಮೇತ ವಿಎ ರಮೇಶ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಚಂದ್ರಶೇಖರ್ ನೇತೃತ್ವ ವಹಿಸಿದ್ದರು.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️