
ಕೋಲಾರ : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಸೆ.24 ರಿಂದ ಮೂರು ದಿನಗಳ ಕಾಲ ನಡೆಯಲಿರುವ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ ಭಾಗವಹಿಸಲಿರುವ 123 ಕ್ರೀಡಾಪಟುಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಅವರು ಎರಡು ಬಸ್ ಗಳ ವ್ಯವಸ್ಥೆ ಮಾಡಿಕೊಟ್ಟರು.
ನಗರದ ಜೂನಿಯರ್ ಕಾಲೇಜು ಹತ್ತಿರ ಮಂಗಳವಾರ ಸಂಜೆ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಕೊತ್ತೂರು ಮಂಜುನಾಥ್ ಬೆಂಬಲಿಗರು ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿಪಾತಕೆ ಹಾರಿಸುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಸದಸ್ಯರಾದ ಎನ್ ಅಂಬರೀಷ್, ಗಂಗಮ್ಮನಪಾಳ್ಳ ರಾಮಯ್ಯ, ಅಮರ್ ಮುಖಂಡರಾದ ಖಾದ್ರಿಪುರ ಬಾಬಣ್ಣ, ಕೋಟೆ ಶ್ರೀನಿವಾಸ್ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಮುರಳಿ ಮೋಹನ್, ಮುಂತಾದವರು ಇದ್ದರು.



