ದೇಶಸುದ್ದಿ

ಚಿಕ್ಕಬಳ್ಳಾಪುರ ನಗರಸಭೆ ಎಂಜಿನಿಯ‌ರ್ ಲೋಕಾಯುಕ್ತ ಬಲೆಗೆ

ಚಿಕ್ಕಬಳ್ಳಾಪುರ: ಲಂಚ ಪಡೆಯುವಾಗ ಇಲ್ಲಿನ ನಗರಸಭೆ ಎಂಜಿನಿಯರ್ ಅರುಣ್ ಬುಧವಾರ ಲೋಕಾಯುಕ್ತರ ದಾಳಿಗೆ ಸಿಲುಕಿದ್ದಾರೆ.

ಗುತ್ತಿಗೆದಾರರೊಬ್ಬರಿಗೆ ಬಿಲ್ ಮಾಡಿಕೊಡಲು ₹ 75 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿಯಲ್ಲಿ ಹಣ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಗುತ್ತಿಗೆ ಕೆಲಸ ಮಾಡಿದ್ದ ಗುತ್ತಿಗೆದಾರರೊಬ್ಬರಿಗೆ ಬಿಲ್ ಮಾಡಿಕೊಡಲು ಅರುಣ್ ₹ 75 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಕಚೇರಿಯಲ್ಲಿಯೇ ₹ 35 ಸಾವಿರ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ವಿಚಾರಣೆ ಮುಂದುವರಿದಿದೆ.

ನಗರಸಭೆ ಅಧಿಕಾರಿಗಳ ಲಂಚಾವತಾರದ ವಿರುದ್ಧ ಈ ಹಿಂದಿನಿಂದಲೂ ಆಕ್ರೋಶ ವ್ಯಕ್ತವಾಗುತ್ತಿತ್ತು. ಆದರೆ ಕೆಲವು ಅಧಿಕಾರಿಗಳು ಸಿಕ್ಕಿ ಹಾಕಿಕೊಳ್ಳದ ರೀತಿಯಲ್ಲಿ ವ್ಯವಹರಿಸುತ್ತಿದ್ದರು ಎನ್ನುವ ಮಾತು ನಗರದಲ್ಲಿ ಜನಜನಿತವಾಗಿದೆ.

ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️

Related Articles

Leave a Reply

Your email address will not be published. Required fields are marked *

Back to top button