ವಿದೇಶ
Bitcoin Scam: ಪ್ರಧಾನಿ ಮೋದಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?, ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಬಿಟ್ ಕಾಯಿನ್(Bitcoin Scam) ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಉತ್ತಮ ಕೆಲಸ ಮುಂದುವರೆಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದರು. ಈಗ ಇದೇ ವಿಚಾರವಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
‘ಬಿಟ್ ಕಾಯಿನ್ ಆರೋಪದ ತನಿಖೆ ನಡೆಸಿ ನಿಮ್ಮ ಮೇಲಿನ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿ ಮೋದಿಯವರು ಆರೋಪವನ್ನೇ ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ?’ ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.