ದೇಶ
Trending

ದೇಶಕ್ಕೆ ನರೇಂದ್ರ ಮೋದಿಯವರ ಕೊಡುಗೆ ಅಪಾರವಾದದ್ದು:-ಸೀಕಲ್ ರಾಮಚಂದ್ರ ಗೌಡ

ಶಿಡ್ಲಘಟ್ಟ ಸೆ 17 ರಕ್ತದಾನವು ಅತ್ಯಂತ ದೊಡ್ಡ ದಾನ ಎಂದು ಅರ್ಥೈಸುತ್ತದೆ. ರಕ್ತದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಹುದು, ಅಲ್ಲದೆ ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಹಾಗೂ ಮಾನವೀಯ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಭಾರತೀಯ ಜನತಾ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು

ನಗರದ ಬಿಜೆಪಿ ಕಛೇರಿಯ ಸೇವಾ ಸೌಧ ಕಛೇರಿ ಆವರಣದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75 ನೇ ಜನ್ಮ ದಿನದ ಆಂಗವಾಗಿ ಸೀಕಲ್ ರಾಮಚಂದ್ರ ಗೌಡರ ನೇತೃತ್ವದಲ್ಲಿ ಹಾಗೂ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಮೋರಿಯಲ್ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಸೀಕಲ್ ರಾಮಚಂದ್ರ ಗೌಡರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿಯವರು ಗುಜರಾತ್ ರಾಜ್ಯದ ಅತ್ಯಂತ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಮತ್ತು ಅತ್ಯಂತ ಹೆಚ್ಚು ದೇಶದ ಪ್ರಧಾನ ಮಂತ್ರಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿರುವ ನರೇಂದ್ರ ಮೋದಿಯವರಿಗೆ ತಾಯಿ ಭಾರತಾಂಬೆಯು ಇನ್ನೂ ಹೆಚ್ಚು ಕಾಲ ಸೇವೆ ಸಲ್ಲಿಸುವಂತೆ ಆರ್ಶೀವಾದಿಸಲಿ ಎಂದು ಹುಟ್ಟು ಹಬ್ಬದ ಶುಭಾಯಗಳು ಕೋರಿದರು

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ ,ಮಾಜಿ ಶಾಸಕ ಎಂ.ರಾಜಣ್ಣ ,ನಿಕಟ ಪೂರ್ವ ಅಧ್ಯಕ್ಷ ಸುರೇಂದ್ರ ಗೌಡ ,ನಗರ ಮಂಡಲ ಅಧ್ಯಕ್ಷ ಕೆ.ನರೇಶ್ ,ನಗರಸಭೆ ಸದಸ್ಯ ಎಸ್.ಎ.ನಾರಾಯಣಸ್ವಾಮಿ ರಾಷ್ಟ್ರೀಯ ಕ್ರೀಡಾ ಪುಟು ಜಯಂತಿ ಗ್ರಾಮ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರು ಕಾರ್ಯಕರ್ತರು ಮುಂತಾದವರು ಹಾಜರಿದ್ದರು

Related Articles

Leave a Reply

Your email address will not be published. Required fields are marked *

Back to top button