26.11 ಲಕ್ಷ ಮೌಲ್ಯದ ಚಿನ್ನದೊಂದಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆಕೆಯನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳವಾರ ಸಂಜೆ ಏರ್ ಅರೇಬಿಯಾ ವಿಮಾನ ಜಿ9 498 ಮೂಲಕ ಶಾರ್ಜಾದಿಂದ ಬೆಂಗಳೂರಿಗೆ ಬಂದಿಳಿದಾಗ ಪ್ರಕರಣ ಬಯಲಾಗಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ರಾತ್ರಿ 9.30 ರ ಸುಮಾರಿಗೆ ಇಳಿದ ಪ್ರಯಾಣಿಕರು ವಿಮಾನ ನಿಲ್ದಾಣದ ಕಟ್ಟಡಕ್ಕೆ ಕಾಲಿಟ್ಟಾಗ, ಟರ್ಮಿನಲ್ ಮಹಡಿಯಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅನುಮಾನಾಸ್ಪದ ರೀತಿಯಲ್ಲಿ ಕಂಡು ಬಂದ ಆಫ್ರಿಕನ್ ಮಹಿಳೆಯನ್ನು ತಡೆದರು.
ಮಹಿಳೆ ಸುಡಾನ್ ಪಾಸ್‌ಪೋರ್ಟ್ ಹೊಂದಿರುವವಳು. ವೈದ್ಯಕೀಯ ವೀಸಾದಲ್ಲಿ ಭಾರತಕ್ಕೆ ಬಂದಿದ್ದಾಳೆಯೇ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಅವಳನ್ನು ಪ್ರಶ್ನಿಸಿದರು. ತಡವರಿಸಿದಾಗ ಆಕೆಯ ಬೆಂಗಳೂರು ಪ್ರವಾಸದ ಬಗ್ಗೆ ಅನುಮಾನ ಹೆಚ್ಚಾಗಿದೆ. ಮಹಿಳಾ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದಾಗ ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ ಮಾಡುವಲ್ಲಿ ತೊಡಗಿರುವುದು ಕಂಡು ಬಂದಿದೆ. ಮತ್ತಷ್ಟು ವಿಚಾರಣೆ ನಡೆಸಿದಾಗ, ಮಹಿಳೆ ಅಧಿಕಾರಿಗಳ ಎದುರು ತಪ್ಪೊಪ್ಪಿಕೊಂಡಿದ್ದಾರೆ.
ತನ್ನ ಗುದನಾಳದೊಳಗೆ ಪೇಸ್ಟ್ ರೂಪದಲ್ಲಿ ಚಿನ್ನವನ್ನು ತುಂಬಿದ ಮೂರು ಕ್ಯಾಪ್ಸುಲ್ಗಳನ್ನು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಳು. ಕ್ಯಾಪ್ಸುಲ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ 535 ಗ್ರಾಂ ಚಿನ್ನದ ಪ್ರಸ್ತುತ ಮಾರುಕಟ್ಟೆ ಮೌಲ್ಯದಲ್ಲಿ 26.11 ಲಕ್ಷ. ಪೇಸ್ಟ್ ಅನ್ನು ಘನ ಬ್ಲಾಕ್ಗೆ ಕರಗಿಸಿ ನಂತರ ಅದನ್ನು ತೂಕ ಮಾಡಿದರು. ಕಸ್ಟಮ್ಸ್ ಸುಂಕವನ್ನು ತಪ್ಪಿಸುವ ಈ ರೀತಿ ಮಾಡಿರೋದಾಗಿ ಮಹಿಳೆ ಬಾಯ್ಬಿಟ್ಟಿದ್ದಾರೆ. ಹೀಗಾಗಿ ಆಕೆಯ ವಿರುದ್ಧ ಚಿನ್ನದ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಲಾಗಿದೆ.
ಆಕೆ ಏಕಾಂಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಳೇ ಅಥವಾ ಬೆಂಗಳೂರಿನಲ್ಲಿ ಬಲವಾದ ಸಂಪರ್ಕ ಹೊಂದಿರುವ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿದ್ದಾಳೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.